Mysore
25
haze

Social Media

ಶನಿವಾರ, 04 ಏಪ್ರಿಲ 2026
Light
Dark

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು.

ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ನೂರಾರು ಜನ, ಮಹಿಳೆಯರು, ವಿದ್ಯಾರ್ಥಿಗಳು ಶಾಲಾ-ಕಾಲೇಜು, ವ್ಯವಹಾರಕ್ಕೆ ಗ್ರಾಮಕ್ಕೆ ಆಗಮಿಸುತ್ತಾರೆ. ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಾನಾ ರೀತಿ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮದ್ಯದ ಅಂಗಡಿಗೆ ಅನುಮತಿ ನೀಡಬಾರದು ಎಂದು ಪಿಡಿಓಗೆ ಮನವಿ ಸಲ್ಲಿಸಿದರು.

ಬಾರ್ ತೆರೆಯಲು ಎನ್ಒಸಿಗಾಗಿ ಅರ್ಜಿ ಹಾಕಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದ ಹಿತ ಕಾಯಬೇಕೆಂದು ವಿನಂತಿ. ಮಾಡಿರುವ ಗ್ರಾಮಸ್ಥರು, ಬಾರ್ ಅಥವಾ ಯಾವುದೇ ರೀತಿಯ ಮದ್ಯದಂಗಡಿ ಪ್ರಾರಂಭಿಸಿದರೆ ರೈತ ಸಂಘ, ಸ್ತ್ರೀ ಶಕ್ತಿ ಸೇರಿ ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!