ಮೈಸೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಭಾಗವಾಗಿರುವ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಂಥರ್ ಗೌಡ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊಡಗಿನ ಕಾಂಗ್ರೆಸ್ ಶಾಸಕರು, ಪೊಲೀಸರನ್ನು ಬಳಸಿಕೊಂಡು ತಮ್ಮ ರಾಜಕೀಯ ಎದುರಾಳಿಗಳನ್ನು ಮುಗಿಸಲು ಮುಂದಾಗಿದ್ದಾರೆ. ವಿನಯ್ ಸಾವಿಗೆ ಸಿದ್ದರಾಮಯ್ಯ, ಪೊನ್ನಣ್ಣ ಮತ್ತು ಮಂಥರ್ ಗೌಡ ನೇರ ಕಾರಣವಾಗಿದ್ದಾರೆ. ಹೀಗಾಗಿ ಅವರಿಬ್ಬರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ ರೀತಿ ವರ್ತನೆ ಮಾಡುತ್ತಿದೆ. ಮೃತ ವಿನಯ್ ಸೋಮಯ್ಯ ಅವರ ಡೆತ್ ನೋಟ್ ನೋಡಿದರೆ ರಕ್ತ ಕುದಿಯುತ್ತದೆ. ವಿನಯ್ ಸಾವಿನ ಮೂಲಕ ರಾಜ್ಯಾದ್ಯಂತ ಜಾಗೃತಿ ಮೂಡಿಸುತ್ತೇವೆ. ಇನ್ನೂ ವಿನಯ್ ಆತ್ಮಹತ್ಯೆ ಪ್ರಕರಣವನ್ನ ಸಿಬಿಐ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…