ಮೈಸೂರು : ನಟ ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಉದ್ಭೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ವಿಷ್ಣು ಕುಟುಂಬದವರು ಪೂಜೆ ಸಲ್ಲಿಸಿದರು.
ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಹಾಗೂ ಅಭಿಮಾನಿಗಳು ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿದರು.
ಸ್ಮಾರಕದ ಬಳಿ ಆಗಮಿಸಿದ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿದ್ದಾರೆ. ನೆಚ್ಚಿನ ನಟನ ರೀತಿಯಲ್ಲೇ ವೇಷ ಭೂಷಣ ತೊಟ್ಟು, ಜಯಘೋಷ ಕೂಗಿ ಸಂಭ್ರಮಿಸಿದರು.
ಇನ್ನೂ ನಗರದಾದ್ಯಂತ ಆಟೋಗಳಲ್ಲಿ ಕನ್ನಡ ಬಾವುಟಗಳಲ್ಲಿ ವಿಷ್ಣುವರ್ಧನ್ ಭಾವಚಿತ್ರವುಳ್ಳ ಸ್ಟಿಕ್ಕರ್‌ಗಳಿಗೆ ಸಿಂಗರಿಸಲಾಗಿತ್ತು.





