Mysore
22
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ.

ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷತ್‌ ಯಾವುದೇ ಅನುಮತಿ ಪಡೆಯದ ಕಾರಣಕ್ಕೆ ನಗರದಲ್ಲಿ ಅಳವಡಿಸಿದ್ದ ಕೇಸರಿ ಬಾವುಟ, ಬ್ಯಾನರ್‌ ಬಂಟಿಂಗ್ಸ್‌ಗಳನ್ನು ತೆರವುಗೊಳಿಸಲಾಗಿದೆ.

ಮಂಡ್ಯದಲ್ಲಿ ಇಂದು ಸಂಜೆ ಬೃಹತ್‌ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ನಗರಸಭೆ ಅಧಿಕಾರಿಗಳ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ಬೇಸರ ಹೊರಹಾಕಿದ್ದಾರೆ.

ಅಲ್ಲದೇ ನಗರಸಭೆ ಅಧಿಕಾರಿಗಳ ನಡೆಗೆ ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಂಡ್ಯ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Tags:
error: Content is protected !!