ಮೈಸೂರು

ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಹಾಗೂ ಪರಿಶೀಲನೆ

ಮೈಸೂರು: ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ರವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರೊಂದಿಗೆ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ಕಂಡು ಕಳವಳ ವ್ಯಕ್ತಪಡಿಸಿದರು.

ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ. ಅವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರು ನಗರದಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಸಮುದಾಯ ಭವನ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಂಗನವಾಡಿ ಕೇಂದ್ರದಲ್ಲಿ ಶುದ್ಧ ಗಾಳಿ, ಬೆಳಕು, ಕುಡಿಯುವ ನೀರಿನ ಕೊರತೆ ಇರುತ್ತದೆ. ಅಲ್ಲದೆ ಕಟ್ಟಡಗಳು ಶಿಥಿಲ ಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುತ್ತದೆ. ಇನ್ನು ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಹೆಗ್ಗಣಗಳು ಬಿಲಾ ತೋಡಿ ಕಟ್ಟಡದ ನೆಲಹಾಸು ಹಾಳಾಗಿರುವುದು, ಇದರಿಂದ ಅಹಾರ ಸಂರಕ್ಷಣೆಗೆ ತೊಡಕುಂಟಾಗಿರುವುದು ಕಂಡು ಬಂದಿರುತ್ತದೆ. ಹಾಗೂ ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಮುಂದುವರೆದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ತಯಾರಿಸುವ ಆಹಾರದಲ್ಲಿ ಪೋಶಕಾಂಶದ ಕೊರತೆ, ಮಕ್ಕಳಿಗೆ ತಯಾರಿಸುವ ಲಡ್ಡು ಹಾಗೂ ಸಾಂಬಾರು ಮಾಡಲು ಉಪಯೋಗಿಸುವ ಬೇಳೆ, ಕಾಳುಗಳು ಅವಧಿ ಮುಕ್ತಾಯವಾಗಿದ್ದ (date Expired) ಆಹಾರ ಪದಾರ್ಥಗಳನ್ನು ಇರುವುದನ್ನು ಕಂಡು ನ್ಯಾಯಾಧೀಶರು ಕಳವಳವನ್ನು ವ್ಯಕ್ತಪಡಿಸಿದ್ದರು. ಸದರಿ ಆಹಾರ ಪದಾರ್ಥಗಳನ್ನು ತಕ್ಷಣ ವಾಪಸ್ಸು ಕಳುಹಿಸುವಂತೆ ಹಾಗೂ ಉತ್ತಮ ಅಹಾರ ಪದಾರ್ಥಗಳು ಪಡೆಯುವಂತೆ ನಿರ್ದೇಶಿಸಿದರು.

ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಮೇಲ್ವಿಚಾರಕರಿಗೆ ಅಂಗನವಾಡಿ ಕೇಂದ್ರಗಳನ್ನು ಹೇಗೆ ನಿಭಾಹಿಸಬೇಕು ಮತ್ತು ಸರ್ಕಾರದ ಆಶಾಯ, ಉದ್ದೇಶಗಳನ್ನು ಮನವರಿಕೆ ಮಾಡಿಕೊಟ್ಟು, ಮೂಲ ಸೌಕರ್ಯಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ಹಾಗೆಯೇ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರ, ಶೂಶ್ರೂಷಕರ, ಪೊಲೀಸ್ ಠಾಣೆಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಅಧಿಕಾರಿಗಳ, ಮೇಲ್ವಿಚಾರಕರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆಗಳನ್ನು ಪ್ರಕಟಿಸುವಂತೆ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

6 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

6 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

9 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

9 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

10 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

10 hours ago