ಮೈಸೂರು: ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ರವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರೊಂದಿಗೆ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಯನ್ನು ಕಂಡು ಕಳವಳ ವ್ಯಕ್ತಪಡಿಸಿದರು.
ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿ.ಜಿ. ಅವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರು ನಗರದಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳು ಸಮುದಾಯ ಭವನ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಂಗನವಾಡಿ ಕೇಂದ್ರದಲ್ಲಿ ಶುದ್ಧ ಗಾಳಿ, ಬೆಳಕು, ಕುಡಿಯುವ ನೀರಿನ ಕೊರತೆ ಇರುತ್ತದೆ. ಅಲ್ಲದೆ ಕಟ್ಟಡಗಳು ಶಿಥಿಲ ಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುತ್ತದೆ. ಇನ್ನು ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಹೆಗ್ಗಣಗಳು ಬಿಲಾ ತೋಡಿ ಕಟ್ಟಡದ ನೆಲಹಾಸು ಹಾಳಾಗಿರುವುದು, ಇದರಿಂದ ಅಹಾರ ಸಂರಕ್ಷಣೆಗೆ ತೊಡಕುಂಟಾಗಿರುವುದು ಕಂಡು ಬಂದಿರುತ್ತದೆ. ಹಾಗೂ ಈ ಕುರಿತು ಅಗತ್ಯ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮುಂದುವರೆದು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ತಯಾರಿಸುವ ಆಹಾರದಲ್ಲಿ ಪೋಶಕಾಂಶದ ಕೊರತೆ, ಮಕ್ಕಳಿಗೆ ತಯಾರಿಸುವ ಲಡ್ಡು ಹಾಗೂ ಸಾಂಬಾರು ಮಾಡಲು ಉಪಯೋಗಿಸುವ ಬೇಳೆ, ಕಾಳುಗಳು ಅವಧಿ ಮುಕ್ತಾಯವಾಗಿದ್ದ (date Expired) ಆಹಾರ ಪದಾರ್ಥಗಳನ್ನು ಇರುವುದನ್ನು ಕಂಡು ನ್ಯಾಯಾಧೀಶರು ಕಳವಳವನ್ನು ವ್ಯಕ್ತಪಡಿಸಿದ್ದರು. ಸದರಿ ಆಹಾರ ಪದಾರ್ಥಗಳನ್ನು ತಕ್ಷಣ ವಾಪಸ್ಸು ಕಳುಹಿಸುವಂತೆ ಹಾಗೂ ಉತ್ತಮ ಅಹಾರ ಪದಾರ್ಥಗಳು ಪಡೆಯುವಂತೆ ನಿರ್ದೇಶಿಸಿದರು.
ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಮೇಲ್ವಿಚಾರಕರಿಗೆ ಅಂಗನವಾಡಿ ಕೇಂದ್ರಗಳನ್ನು ಹೇಗೆ ನಿಭಾಹಿಸಬೇಕು ಮತ್ತು ಸರ್ಕಾರದ ಆಶಾಯ, ಉದ್ದೇಶಗಳನ್ನು ಮನವರಿಕೆ ಮಾಡಿಕೊಟ್ಟು, ಮೂಲ ಸೌಕರ್ಯಗಳ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.
ಹಾಗೆಯೇ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರ, ಶೂಶ್ರೂಷಕರ, ಪೊಲೀಸ್ ಠಾಣೆಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಅಧಿಕಾರಿಗಳ, ಮೇಲ್ವಿಚಾರಕರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆಗಳನ್ನು ಪ್ರಕಟಿಸುವಂತೆ ಸೂಚಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…