Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹಿರಿಯ ಕನ್ನಡಪರ ಹೋರಾಟಗಾರ ತಾಯೂರು ವಿಠ್ಠಲಮೂರ್ತಿ ನಿಧನ

ಮೈಸೂರು: ಕನ್ನಡಪರ ಹಿರಿಯ ಚಳುವಳಿಕಾರ, ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ ಅವರು ಮಂಗಳವಾರ (ಜುಲೈ. 9) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ.

82 ವರ್ಷದ ತಾಯೂರು ವಿಠ್ಠಲಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮೈಸೂರಿನ ಅಗ್ರಹಾರದ ನಿವಾಸದಲ್ಲಿ ನಿಧನರಾಗಿದ್ದಾರೆ.

ಹಲವಾರು ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದ ಇವರು ಸಹಕಾರ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮೈಸೂರಿನ ಕೃಷ್ಣರಾಜೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರಿಗೆ ಆಪ್ತರಾಗಿದ್ದರು.

ಮೈಸೂರಿನ ಅಗ್ರಹಾರದಲ್ಲಿ ವಿಠ್ಠಲಮೂರ್ತಿ ಅಗ್ರಹಾರ ನಿವಾಸದಲ್ಲಿ ಇಂದು ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ವಿಠ್ಠಲಮೂರ್ತಿ ಅವರ ಹುಟ್ಟೂರು ತಾಯೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

Tags: