ಮೈಸೂರು: ಕನ್ನಡಪರ ಹಿರಿಯ ಚಳುವಳಿಕಾರ, ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ ಅವರು ಮಂಗಳವಾರ (ಜುಲೈ. 9) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ.
82 ವರ್ಷದ ತಾಯೂರು ವಿಠ್ಠಲಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮೈಸೂರಿನ ಅಗ್ರಹಾರದ ನಿವಾಸದಲ್ಲಿ ನಿಧನರಾಗಿದ್ದಾರೆ.
ಹಲವಾರು ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದ ಇವರು ಸಹಕಾರ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮೈಸೂರಿನ ಕೃಷ್ಣರಾಜೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರಿಗೆ ಆಪ್ತರಾಗಿದ್ದರು.
ಮೈಸೂರಿನ ಅಗ್ರಹಾರದಲ್ಲಿ ವಿಠ್ಠಲಮೂರ್ತಿ ಅಗ್ರಹಾರ ನಿವಾಸದಲ್ಲಿ ಇಂದು ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ವಿಠ್ಠಲಮೂರ್ತಿ ಅವರ ಹುಟ್ಟೂರು ತಾಯೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…