ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್ ಮನವಿ ಮಾಡಿದರು.
ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷದಲ್ಲಿ ಮೈಸೂರು ಕೊಡಗು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ , ಜಲಜೀವನ್ ಮಿಷನ್ ಮೂಲಕ ಎರಡುವರೆ ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಕೆ , ಪ್ರಾದಾನ ಮಂತ್ರಿ ಅವಾಜ್ ಯೋಜನೆಯ ಮೂಲಕ ಆಶ್ರಯ ಮನೆಗಳು, 41 ಜನ ಔಷದಿ ಕೆಂದ್ರದ ಮೂಲಕ ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಔಷದಿ ಪೂರೈಕೆ ,ವಂದೇಭಾರತ್ ರೈಲುಗಳ ದೇಶದ ವಿವಿದೆಡೆಗೆ ಸಂಪರ್ಕ, ಹೀಗೆ ಹಲವಾರು ಯೋಜನೆಗಳನ್ನು ಮೈಸೂರು ಕೊಡಗು ಕ್ಷೇತ್ರಕ್ಕೆ ಕೊಟ್ಟಿದ್ದಾರೆ.
ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದರೊಂದಿಗೆ ಬರುವ ಚುನಾವಣೆಯಲ್ಲಿ ಮತ್ತೆ ನಾವು ಮೋದಿಯವರ ಕೈ ಬಲಪಡಿಸಬೇಕಿದೆ ಶ್ರೇಷ್ಠ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು
ನಮ್ಮ ಪೂರ್ವಜರಂತೆ ಜನರ ನಡುಗೆ ಇದ್ದು ಕೆಲಸ ಮಾಡುತ್ತೇನೆ : ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿ ಯದುವೀರ್ ರವರ ವಿರುದ್ದ ಮಹರಾಜರಾಗಿ ಅರಮನೆಯೊಗಳೆ ಇರುವವರು ಜನರ ಮಧ್ಯೆ ಬಂದು ಸಮಸ್ಯೆ ಬಗೆಹರಿಸುತ್ತಾರಾ ಜನಸಾಮಾನ್ಯರು ಅವರನ್ನು ಭೇಟಿ ಮಾಡಲು ಆಗುತ್ತಾ ಎಂಬ ಅಪಪ್ರಚಾರ ನೆಡೆಸುತ್ತಿದ್ದು ಈಎಲ್ಲಾ ಅಪಪ್ರಚಾರಗಳಿಗೂ ಯದುವೀರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಪೂರ್ವಜರು ಅರಮನೆಯಲ್ಲಿ ಹುಟ್ಟಿದ್ದರೂ ಜನ ಸಾಮನ್ಯರ ನಡುವೆ ಇದ್ದು ನೆರವಾಗುತ್ತಿದ್ದರು ನಾವು ಅವರಂತೆ ನಿಮ್ಮ ನಡುವೆ ಇದ್ದು ನಿಮ್ಮ ಸೇವೆ ಮಾಡುತ್ತೇನೆ ನಿಮ್ಮಗಳ ಸೇವೆ ಮಾಡುವುದು ನನ್ನ ಪಾಲಿನ ಸೌಭಾಗ್ಯವೆಂದು ಭಾವಿಸಿದ್ದೇನೆ ಯಾವುದೆ ಅಪಪ್ರಚಾರಗಳಿಗೆ ಕಿವಿಕೊಡದೆ ನನ್ನನ್ನು ಬೆಂಬಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು.
ಈ ವೇಳೆ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೆಗೌಡ, ಬಿಜೆಪಿ ಯುವ ಮುಖಂಡ ಕವೀಶ್ ಗೌಡ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…