ಮೈಸೂರು: ದೇಶದ ಪ್ರಗತಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಮದಕರಿ ನಾಯಕ ಮತ್ತು ಓನಕೆ ಒಬವ್ವರನ್ನು ಕೊಂದ ದುಷ್ಟರನ್ನು ನಾಯಕ ಸಮುದಾಯವು ಮರೆಯಬಾರದು. ಅಂತವರ ಕೈಗೆ ಅಧಿಕಾರ ನೀಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಸಮಾವೇಶದಲ್ಲಿ ಮಾತನಾಡಿದ ಅವರು ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು 40 ವರ್ಷಗಳಿಂದಲೂ ಇದ್ದ ಬೇಡಿಕೆಯನ್ನು ಈ ಭಾಗದ ಯಾವುದೇ ಸಂಸದರೂ ಪರಿಹರಿಸಲಿಲ್ಲ. ಶ್ರೀಕಂಠದತ್ತ ನರಸಿಂಹರಾಜರ ಆದಿಯಾಗಿ ಎಚ್ ವಿಶ್ವನಾಥ, ಸಿ ಎಚ್ ವಿಜಯಶಂಕರ್ ಅವರು ಸೇರಿದಂತೆ ಯಾವ ಸಂಸದರೂ ನಾಯಕ ಸಮುದಾಯದ ಬೇಡಿಕೆ ಈಡೇರಿಸಿಲ್ಲ. ಆದರೆ, ನಾನು ಸಂಸದನಾಗಿ ನಾಲ್ಕು ವರ್ಷಗಳಲ್ಲಿ ನಾಯಕ ಸಮುದಾಯದ ಬೇಡಿಕೆ ಈಡೇರಿಸಿದೆ ಎಂದರು.
ನಾನು ಸಂಸದನಾಗುವಲ್ಲಿ ನಾಯಕ ಸಮುದಾಯದ ಬೆಂಬಲ ಸಾಕಷ್ಟಿದೆ. ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯ. ಮೈಸೂರಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕುಟುಂಬದ ಯದುವೀರ್ ಚುನಾವಣೆಗೆ ನಿಂತಿದ್ದು, ನಾಯಕ ಸಮುದಾಯ ಅವರನ್ನು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಅವರಿಗೆ ಕತ್ತಿಗುರಾಣಿ ನೀಡಿ ಅಭಿನಂದಿಸಲಾಯಿತು. ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್‌ವಾಲ್, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು, ಮಾಜಿ ಸಚಿವರಾದ ಎಸ್ ಎ ರಾಮದಾಸ್, ಎನ್ ಮಹೇಶ್, ಶಾಸಕ ಟಿ ಎಸ್ ಶ್ರೀವತ್ಸ, ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ, ಮಾಜಿ ಮಹಾಪೌರ ಶಿವಕುಮಾರ್, ರಾಜ್ಯ ಉಪಾಧ್ಯಕ್ಷ ಎಂ ರಾಜೇಂದ್ರ, ಕೇಂದ್ರೀಯ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ನಗರಾಧ್ಯಕ್ಷ ಎಲ್ ನಾಗೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…