Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಸೂರು-ಕೊಡಗು-ಚಾಮರಾಜನಗರದಲ್ಲಿ ʼಕೈʼ ಅಭ್ಯರ್ಥಿಗೆ ಮತ ನೀಡಿ : ಮರಿತಿಬ್ಬೇಗೌಡ !

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ.

ಎರಡನೇ ಬಾರಿಗೆ ೧೦ ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ೨೦೨೪-೨೫ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ ೫೩ ಸಾವಿರ ಕೋಟಿ ರೂ. ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ೮೯ ಸಾವಿರ ಕೋಟಿ ರೂ. ಹಣವನ್ನು ನಿಗದಿಗೊಳಿಸಿದೆ. ಆದರೆ, ೫ ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಜಾ.ದಳ ಪಕ್ಷದ ನಾಯಕರು ವಿರೋಧಿಸುತ್ತಿರುವುದು ಸರಿ ಇಲ್ಲ ಎಂದು ತಿಳಿಸಿದರು.

ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದುಬಿದ್ದ ವಿಚಾರವನ್ನು ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಅನುದಾನ ಬಿಡುಗಡೆ ಮಾಡುವಂತಹ ಕೆಲಸವನ್ನು ಮಾಡಿರುವುದು ವಿಶೇಷವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ  ಮಾಡುತ್ತಿರುವವರು ತಾವು ಕೂಡ ಫಲಾನುಭವಿಗಳಾಗಿರುವುದನ್ನು ಮರೆಯಬಾರದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌, ನಗರಾಧ್ಯಕ್ಷ ಆರ್.ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.

ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎನ್.ಮಹೇಶ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೆ, ಚುನಾವಣೆ ಮುಂದಿಟ್ಟುಕೊಂಡು ಜಾತಿ ವಿಚಾರವಾಗಿ ಮಾತನಾಡಿರುವ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ಎನ್.ಮಹೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಚುನಾವಣೆ ಮುಗಿಯುವವರೆಗೂ ಅವರು ಯಾವ ಪ್ರಚಾರವು ಮಾಡಬಾರದೆಂದು ದೂರು ನೀಡಲಾಗಿದೆ.
ಡಾ.ಬಿ.ಜೆ.ವಿಜುಂ ಕುವಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

 

Tags: