ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ.
ಎರಡನೇ ಬಾರಿಗೆ ೧೦ ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ೨೦೨೪-೨೫ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ ೫೩ ಸಾವಿರ ಕೋಟಿ ರೂ. ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ೮೯ ಸಾವಿರ ಕೋಟಿ ರೂ. ಹಣವನ್ನು ನಿಗದಿಗೊಳಿಸಿದೆ. ಆದರೆ, ೫ ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಜಾ.ದಳ ಪಕ್ಷದ ನಾಯಕರು ವಿರೋಧಿಸುತ್ತಿರುವುದು ಸರಿ ಇಲ್ಲ ಎಂದು ತಿಳಿಸಿದರು.
ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದುಬಿದ್ದ ವಿಚಾರವನ್ನು ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ಅನುದಾನ ಬಿಡುಗಡೆ ಮಾಡುವಂತಹ ಕೆಲಸವನ್ನು ಮಾಡಿರುವುದು ವಿಶೇಷವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುತ್ತಿರುವವರು ತಾವು ಕೂಡ ಫಲಾನುಭವಿಗಳಾಗಿರುವುದನ್ನು ಮರೆಯಬಾರದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು ಸುದ್ದಿಗೋಷ್ಠಿುಂಲ್ಲಿ ಹಾಜರಿದ್ದರು.
ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎನ್.ಮಹೇಶ್ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೆ, ಚುನಾವಣೆ ಮುಂದಿಟ್ಟುಕೊಂಡು ಜಾತಿ ವಿಚಾರವಾಗಿ ಮಾತನಾಡಿರುವ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಚುನಾವಣಾಧಿಕಾರಿಗೆ ಎನ್.ಮಹೇಶ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಚುನಾವಣೆ ಮುಗಿಯುವವರೆಗೂ ಅವರು ಯಾವ ಪ್ರಚಾರವು ಮಾಡಬಾರದೆಂದು ದೂರು ನೀಡಲಾಗಿದೆ.
– ಡಾ.ಬಿ.ಜೆ.ವಿಜುಂ ಕುವಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…