ಮೈಸೂರು

ಏ.26ರಂದು ತಪ್ಪದೇ ಮತದಾನ ಮಾಡಿ : ಧರಣೇಶ್

ಮೈಸೂರು :  ಮತದಾನ ಮಾಡುವುದು ಭಾರತೀಯ ಪ್ರಜೆಗಳಾದ ನಮ್ಮ ಹಕ್ಕು ಮತ್ತು ಕರ್ತವ್ಯ ಆದ್ದರಿಂದ ಇದೇ ಏಪ್ರಿಲ್ 26ರ ಮತದಾನದ ದಿನ ತಪ್ಪದೇ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಹಿನ್ನೆಲೆ ಗುರುವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ವೃತದಲ್ಲಿ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಭಾರತ ಸಂವಿಧಾನದಲ್ಲಿ ಮತದಾನ ಮಾಡುವ ಹಕ್ಕನ್ನು 18 ವರ್ಷ ತುಂಬಿದ ಎಲ್ಲರಿಗೂ ಅವಕಾಶ ಕಲ್ಪಸಲಾಗಿದೆ. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ನೀವೇ ಆಯ್ಕೆ ಮಾಡಿಕೊಳ್ಳುವ ಅಧಿಕಾರ ನಿಮ್ಮ ಕೈಯಲ್ಲಿದೆ. ಹಕ್ಕನ್ನು ಚಾಚು ತಪ್ಪದೇ ಪಾಲಿಸಿ ಎಂದು ಹೇಳಿದರು.

ಮತದಾನದಿಂದ ಯಾರು ದೂರ ಉಳಿಯಬಾರದು, ನಿಮ್ಮ ನೆರೆಹೊರೆಯ ವರಿಗೂ ತಿಳಿಸಿ, ‘ಮತದಾರರ ನಡೆ ಮತಗಟ್ಟೆಯ ಕಡೆ’
ಇರಬೇಕು ಆಗ ಮಾತ್ರ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಾಧ್ಯ ಎಂದು ಹೇಳಿದರು.

ಡಿ.ಬಿ.ಕುಪ್ಪೆ, ಹೊಸೂರು, ಬಾವಲಿ ಹಾಗೂ ಆನೆ ಮಾಳದ ಹಾಡಿಗಳಿಗೆ ತೆರಳಿ ಚುನಾವಣಾ ಪೋಸ್ಟರ್ ಅಂಟಿಸಿ, ಮತದಾನ ಪ್ರತಿಜ್ಞಾವಿಧಿ ಬೋಧಿಸಿ ಯಾವುದೇ ಆಸೆ – ಆಮಿಷಗಳಿಗೆ ಮರಳಾದೆ ವಿವೇಚನೆಯಿಂದ ಮತದಾನ ಮಾಡುವಂತೆ ಜನರಿಗೆ ಅರಿವು ಮೂಡಿಸಲಾಯಿತು.

ಈ ವೇಳೆ ತಹಶೀಲ್ದಾರ್ ಶ್ರೀನಿವಾಸ್, ಸಹಾಯಕ ನಿರ್ದೇಶಕರು (ಗ್ರಾ.ಉ) ರಘುನಾಥ್ ಕೆ.ಎಂ, ತಾಲ್ಲೂಕು ಯೋಜನಾಧಿಕಾರಿ ರಂಗಸ್ವಾಮಿ ಕೆ, ಪಿಡಿಒ ದೇವರಾಜು ಎಂ.ಕೆ, ಐಇಸಿ ಸಂಯೋಜಕ ನಿಂಗರಾಜು ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.

ಪೋಟೋ ಶೀರ್ಷಿಕೆ: ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಾಳ ಹಾಡಿಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಹಾಡಿ ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

10 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

11 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

11 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

11 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

11 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

13 hours ago