ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಮತದಾನ ಮಾಡುವ ಜೊತೆಗೆ ಸುತ್ತಮುತ್ತಲಿನವರಿಗೂ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್ ಅವರು ತಿಳಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ತಾಲ್ಲೂಕಿನ ಇಲವಾಲ ಗ್ರಾಮ ಪಂಚಾಯಿತಿ ವತಿಯಿಂದ ಮತದಾನ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮತದಾನ ದಿನವಾದ ಏಪ್ರಿಲ್ 26 ಶುಕ್ರವಾರದಂದು ಯಾವುದೇ ಪ್ರವಾಸ ಕೈಗೊಳ್ಳದೆ ತಪ್ಪದೇ ಎಲ್ಲರೂ ಮತದಾನ ಮಾಡಬೇಕು.
ಪ್ರಜಾಪ್ರಬುತ್ವ ಹಬ್ಬವಾದ ಈ ಚುನಾವಣೆಯಲ್ಲಿ ಪಾಲ್ಗೊಂಡು ಸಧೃಡ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಮತದಾರಿಗೆ ಮತಗಟ್ಟೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾದೆ.
ನೆರಳು, ಕುಡಿಯುವ ನೀರು, ಶೌಚಾಲಯ, ಓಆರ್‌ಎಸ್ ದ್ರಾವಣ, ಗಾಲಿ ಕುರ್ಚಿ ಸೇರಿದಂತೆ ವಿಶೇಷ ಚೇತನರಿಗೆ ಅನುಕೂಲವಾಗುವ ಸೌಲಭ್ಯ ಇರಲಿದೆ ಎಂದರು.
ಕೇಂದ್ರ ಚುನಾವಣಾ ಆಯೋಗವು ವಿವಿಧ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಡುಗಡೆ ಮಾಡಿದೆ.
ಸಿ-ವಿಜಿಲ್, ಕೆವೈಸಿ, ಸಕ್ಷಮ್, ಸುವಿಧಾ, ವಿಎಚ್‌ಪಿ ಅ್ಯಪ್ ಮೂಲಕ ಮೂಲಕ ಮತದಾರರು ಚುನಾವಣೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ, ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾರರಿಗೆ ಅರಿವು ಮೂಡಿಸಲಾಯಿತು.
ಬಳಿಕ ಜನಸಂದಣಿ ಪ್ರದೇಶದಲ್ಲಿ ಪೋಸ್ಟರ್ ಹಾಗೂ ಮನೆಮನೆಗೆ ಸ್ಟಿಕ್ಕರ್ ಅಂಟಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಒ ಡಿ.ಸಿ.ಶಿವಣ್ಣ, ಕಾರ್ಯದರ್ಶಿ ಕುಮಾರನಾಯ್ಕ, ಎನ್.ಆರ್.ಎಲ್.ಎಂ ಸಂಜೀವಿನಿ ಒಕ್ಕೂಟದ ಟಿಪಿಎಂ ನಾಗರಾಜು, ವಲಯ ಮೇಲ್ವೀಚಾರಕರಾದ ಪರಶಿವಮೂರ್ತಿ, ಮೇರಿ, ಎಂಬಿಕೆ ಸೌಮ್ಯ, ತಾಲ್ಲೂಕಿನ ಪಶುಸಖಿ, ಕೃಷಿ ಸಖಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.