ಮೈಸೂರು

ಇಂದಿನಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯ ಹಂಚಿಕೆ: ಡಾ ಕೆ ವಿ ರಾಜೇಂದ್ರ

ಮೈಸೂರು: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಮತದಾರರು ಮತದಾನ ಮಾಡಲು ಮುಂದೆ ಬರುವಂತೆ ಮಾಡಲು ಇಂದಿನಿಂದ ಮತದಾರರ ಮಾಹಿತಿ ಚೀಟಿಯನ್ನು ಹಂಚಲಾಗುವುದು. ಇದರಿಂದ ಮತದಾರರು ಆ ಚೀಟಿಯ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಪೋಲಿಂಗ್ ಸ್ಟೇಷನ್ನ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ ರಾಜೇಂದ್ರ ಮಾಹಿತಿ ನೀಡಿದರು.

ಇಂದು ಚೆಸ್ಕಾಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ಬಲೂನ್ ಅನಾವರಣ ಹಾಗೂ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೂತ್ ಮಟ್ಟದ ಅಧಿಕಾರಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ಹಂಚಿಕೆ ಮಾಡಿಸಲಾಗುತ್ತದೆ ಹಾಗೂ ಮತದಾನ ಮಾರ್ಗದರ್ಶಿಗಳಿಂದ ಅವರಿಗೆ ಮಾಹಿತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಚುನಾವಣೆಯನ್ನು ಯಶಸ್ವಿಗೊಳಿಸಲು ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸಲು ಸೆಸ್ಕಾಂನವರು ನಮ್ಮೊಂದಿಗೆ ಸೇರಿ ತಮ್ಮ ಸಿಬ್ಬಂದಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ತಲುಪುವಂತೆ ಮಾಡಬೇಕು. ಆಗ ಮಾತ್ರವೇ ನಮ್ಮ ಉದ್ದೇಶ ಸಫಲವಾಗುವುದು ಎಂದರು.

ಜಿಲ್ಲಾ ಸ್ವೀಪ್ ಸಮಿತಿಯು ಚುನಾವಣೆಯನ್ನು ಯಶಸ್ವಿಯಾಗಿಸಲು ಗ್ರಾಮ, ತಾಲೂಕು ಹಾಗೂ ಪಾಲಿಕೆಯ ವ್ಯಾಪ್ತಿಯಲ್ಲಿ ವಿವಿಧ ರೀತಿಯ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರಲ್ಲಿ ನೈತಿಕ ಮತದಾನ ಮಾಡಲು ಪ್ರೇರೇಪಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ ಅವರು ಮಾತನಾಡಿ, ಹಿಂದೆಂದೂ ಆಗಿರದಷ್ಟು ಮತದಾನವನ್ನು ಈ ಬಾರಿಯ ಚುನಾವಣೆಯಲ್ಲಿ ಆಗುವಂತೆ ಮಾಡಬೇಕು. ವಿಭಿನ್ನವಾಗಿ ಜನರ ಮುಂದೆ ಮತದಾನದ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಅವರಿಗೂ ಮತದಾನ ಮಾಡಲೇಬೇಕೆಂಬ ಮನೋಭಾವ ಉಂಟಾಗುತ್ತದೆ. ಇದರಿಂದ ಮತದಾನ ಹೆಚ್ಚಳದ ಉದ್ದೇಶ ಸಫಲವಾಗುತ್ತದೆ ಎಂದರು.

ಕನ್ನಡದ ಚಲನಚಿತ್ರ ನಟರಾದ ಜಿಮ್ ರವಿ ನವರು ಮಾತನಾಡಿ, ಮತದಾನ ಎಂಬುದು ಒಂದು ಹಬ್ಬದ ಹಾಗೆ ಇದರಲ್ಲಿ ಎಲ್ಲರೂ ನೈತಿಕವಾಗಿ ಭಾಗವಹಿಸಬೇಕು. ಸದೃಢ ದೇಹಬೇಕೆಂದರೆ ಪ್ರತಿನಿತ್ಯವು ವ್ಯಾಯಾಮ ಮಾಡಬೇಕು ಅದೇ ರೀತಿಯಾಗಿ ದೇಶವನ್ನು ಅಭಿವೃದ್ಧಿಗೊಳಿಸಲು ಉತ್ತಮ ನಾಯಕನ ಆಯ್ಕೆ ಮಾಡಲು ಕಡ್ಡಾಯವಾಗಿ ಮತದಾನ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಚುನಾವಣೆಯ ದಿನದಂದು ರಜಾ ದಿನ ಎಂದು ಭಾವಿಸುತ್ತಾರೆ ಆದರೆ ಅದು ತಪ್ಪು ಮತದಾನ ನಮ್ಮೆಲ್ಲರ ಹಕ್ಕು ಆ ದಿನದಂದು ಪ್ರತಿಯೊಬ್ಬರು ತಮ್ಮ ಮತ ಚಲಾಯಿಸಬೇಕು ಎಂದರು.

ಮತದಾರರು ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೆ ನೈತಿಕವಾಗಿ ನಿಮ್ಮ ಮತವನ್ನು ಚಲಾಯಿಸುವ ಮೂಲಕ ಈ ಬಾರಿ ಮೈಸೂರಿನಲ್ಲಿ ಶೇಕಡ ನೂರಕ್ಕೆ ನೂರರಷ್ಟು ಮತದಾನ ಮಾಡುವುದಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕೆಎಂ ಗಾಯತ್ರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಎನ್ ಎನ್ ಮಧು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

3 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

7 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

7 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

8 hours ago