Mysore
18
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮತದಾರರು ಬಿಜೆಪಿ-ಜೆಡಿಎಸ್‌ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ-ಜೆಡಿಎಸ್‌ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಇಂದು(ನ.25) ಮಲೆ ಮಹದೇಶ್ವರ ಸ್ವಾಮಿಯ 54ನೇ ಉತ್ಸವಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಚುನಾವಣೆಯ ಮೊದಲು ನೀಡಿದ್ದಂತಹ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅವುಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಹೀಗಾಗಿ ಮತದಾರರಿಗೆ ಗ್ಯಾರಂಟಿ ಯೋಜನೆಗಳು ಮೆಚ್ಚುಗೆಯಾಗಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದರು ಎಂದಿದ್ದಾರೆ.

ರಾಜ್ಯದ ಉಪಚುನಾವಣೆಯ ವೇಳೆ ಮೈತ್ರಿ ಪಕ್ಷಗಳು ನಮ್ಮ ಸರ್ಕಾರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅಬ್ಬರದ ಪ್ರಚಾರ ಮಾಡಿದ್ದರು. ಅಲ್ಲದೇ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರು. ಆದರೆ ಮತದಾರರು ಅವುಗಳೆಲ್ಲವನ್ನು ಮೆಟ್ಟಿ ನಿಂತು ಆ ಹೇಳಿಕೆಗಳಿಗೆ ಕಿವಿಗೊಡದೆ ಮೈತ್ರಿಯನ್ನು ತಿರಸ್ಕರಿಸಿದ್ದಾರೆ. ಜೊತೆಗೆ ಅದಕ್ಕೆ ಪೂರಕವಾಗಿ ಚುನಾವಣಾ ಫಲಿತಾಂಶದಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

 

Tags:
error: Content is protected !!