ಮೈಸೂರು : ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.
ಇಂದು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.
ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ದವಾಗಿದ್ದು, ಇ ವಿ ಎಂ ಗಳನ್ನು ರಾಂಡಮೈಸೇಶನ್ ಮಾಡಿಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂ ಗೆ ಕಳುಹಿಸಿಕೊಡಲಾಗಿದೆ ಎಂದರು.
ಮೈಸೂರಿನಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನದ ದಿನಾಂಕವನ್ನು ತಿಳಿಸಿ ಮೈಸೂರಿನ ಜನರನ್ನು ಆಕರ್ಷಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಜನರಿಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಿ ಅದರ ಬಗ್ಗೆ ಜನರಲ್ಲಿ ಮೂಡಿಸಲಾಗಿತ್ತದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ 2915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಟ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ ಎಂದರು.
2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 70ರಷ್ಟು ಮತದಾನವಾಗಿದ್ದು, ಈ ಬಾರಿ ಶೇಕಡ 75ರಷ್ಟು ನ್ನು ದಾಟಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ ಮಧು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು