ಮೈಸೂರು

ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಹಕ್ಕನ್ನು ಚಲಾಯಿಸಬೇಕು -ಡಾ. ಕೆ ವಿ ರಾಜೇಂದ್ರ

ಮೈಸೂರು :  ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.

ಇಂದು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.

ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ದವಾಗಿದ್ದು, ಇ ವಿ ಎಂ ಗಳನ್ನು ರಾಂಡಮೈಸೇಶನ್ ಮಾಡಿಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂ ಗೆ ಕಳುಹಿಸಿಕೊಡಲಾಗಿದೆ ಎಂದರು.

ಮೈಸೂರಿನಲ್ಲಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನದ ದಿನಾಂಕವನ್ನು ತಿಳಿಸಿ ಮೈಸೂರಿನ ಜನರನ್ನು ಆಕರ್ಷಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಜನರಿಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಿ ಅದರ ಬಗ್ಗೆ ಜನರಲ್ಲಿ ಮೂಡಿಸಲಾಗಿತ್ತದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ 2915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಟ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ ಎಂದರು.

2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 70ರಷ್ಟು ಮತದಾನವಾಗಿದ್ದು, ಈ ಬಾರಿ ಶೇಕಡ 75ರಷ್ಟು ನ್ನು ದಾಟಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ ಮಧು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago