ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಲಾಯಿತು.
ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಏಪ್ರಿಲ್ 26 ರಂದು ಎಲ್ಲರೂ ಮತದಾನದ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ವಾಣಿ ವಿ .ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್,ಸಹಾಯಕ ಕಂದಾಯ ಅಧಿಕಾರಿ ಸಿದ್ದರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.