ಮೈಸೂರು

ನಗರದಲ್ಲಿ ವಿವಿಧ ಮಠಾಧೀಶರು ಹಾಗೂ ರಾಜಕಾರಣಿಗಳಿಂದ ಮತ ಚಲಾವಣೆ !

ಮೈಸೂರು : ಲೋಕಸಭಾ ಚುನಾವಣೆಯ ದಿನವಾದ ಇಂದು ರಾಜ್ಯದ ೧೪ ಕ್ಷೇತ್ರದಲ್ಲಿ ಮೊದಲನೆ ಹಂತದ ಮತದಾನ ನಡೆಯುತ್ತಿದೆ.

ಈ ವೇಳೆ ನಗರದಲ್ಲಿ ವಿವಿಧ ಮಠಾಧೀಶರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಜಿಗಳವರು ಇಂದು ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುತ್ತೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಪ್ರಜಾಪ್ರಭುತ್ವವನ್ನು ಉಳಿಸಿ ಇದು ನಮ್ಮೆಲ್ಲರ ಹಕ್ಕು ಎಂದು ಸಾರ್ವಜನಿಕರಿಗೆ ಸಂದೇಶ ಸಾರಿದರು.

ನಗರದ ಅವದೂತ ದತ್ತಪೀಠದ ಹಿರಿಯ ಪೀಠಾಧಿಪತಿಗಳಾದ  ಗಣಪತಿ ಸಚ್ಚಿದಾನಂದಾ ಸ್ವಾಮೀಜಿ ಹಾಗೂ ಬಾಲ ಸ್ವಾಮೀಜಿಗಳಾದ ದತ್ತ ವಿಜಯಾನಾಂದ ತೀರ್ಥ ಸ್ವಾಮೀಜಿಗಳು ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಬೂತ್ ನಂಬರ್ 237ರಲ್ಲಿ ತಮ್ಮ ಮತ ಚಲಾಯಿಸಿದರು.

ಮೈಸೂರ್ ನಗರ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಲ್ ನಾಗೇಂದ್ರ ಅವರು ಒಂಬತ್ತು ಗಂಟೆಗೆ ಜಯನಗರದ ಬಾಲೋಧ್ಯಾನ ಇಂಗ್ಲಿಷ್ ಶಾಲೆಯಲ್ಲಿ ತಮ್ಮ ಮತ ಚಲಾಯಿಸುವರು.

ಇನ್ನು ಕೆ.ಅರ್.ಕ್ಷೇತ್ರದ.ಶಾಸಕರಾದ ಟಿ.ಎಸ್.ಶ್ರೀವತ್ಸ ರವರು ಸರತಿ ಸಾಲಿನಲ್ಲಿ ನಿಂತು ಬೆಳ್ಳಗೆ 7.30 ಕ್ಕೆ ವಾರ್ಡ್ ನಂಬರ್ 51 ಬೂತ್ ನಂಬರ್ 139 (ಸಂಸ್ಕೃತ ಪಾಠಶಾಲೆಯಲ್ಲಿ) ಮತದಾನ ಮಾಡಿದರು.

ಚಿತ್ರ ನಟಿ ಹಾಗೂ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್‌ ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು.

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

14 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

15 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

19 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

19 hours ago