ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ ಮೈಸೂರು-ಕೊಡಗು ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್, ಕಾಂಗ್ರೆಸ್‌ನ ಎಂ. ಲಕ್ಷ್ಮಣ್ ಸೇರಿದಂತೆ ಒಟ್ಟು 18 ಮತದಾರರ ಭವಿಷ್ಯ ಬರೆಯಲು ಮತದಾರರು ಸಿದ್ಧರಾಗಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ವರೆಗೆ ಮತದಾನ ನೆಡಯಲಿದೆ. ನಗರದ ವಿವಿಧ ಭಾಗಗಳಲ್ಲಿ ಬೆಳಗಿನಿಂದಲೇ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿರುವ ಕಂಡುಬಂದಿತು.
ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಎಲ್ಲಾ ಸೂಕ್ತಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇನ್ನು ಚುನಾವಣಾ ಕಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಮತದಾರರನ್ನು ತಮ್ಮತ್ತ ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.





