Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮತದಾನ ನಮ್ಮ ಆದ್ಯ ಕರ್ತವ್ಯ: ಇಒ ಧರಣೇಶ್

  • ಅಂತರಸಂತೆಯಲ್ಲಿ ಮತದಾನ ಜಾಗೃತಿ!

ಮೈಸೂರು : ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಕರೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಹಿನ್ನೆಲೆ
ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಆಟೋ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಮಾಡುವುದು ನಿಮ್ಮ ಹಕ್ಕು, ಇದೇ ಏಪ್ರಿಲ್ 26ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6ರವರಗೆ ಮತದಾನ ಪ್ರಕ್ರಿಯೆಯ ನಡೆಯಲಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ ಚಲಾಯಿಸಿ ಶೇಕಡವಾರು ಪ್ರಮಾಣವನ್ನು ಹೆಚ್ಚಿಸಬೇಕು
ಎಂದು ಹೇಳಿದರು.

Tags: