Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಿವಿಪುರಂ ಸಂಚಾರಿ ಪೊಲೀಸರ ಕಾರ್ಯಾಚರಣೆ: ಕರ್ಕಶ ಶಬ್ಧ ಮಾಡುತ್ತಿದ್ದ ಬೈಕ್‌ಗಳು ವಶಕ್ಕೆ

loud noise Bikes seized

ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ವಿವಿ ಪುರಂ ವ್ಯಾಪ್ತಿಯಲ್ಲಿ ಕರ್ಕಶವಾಗಿ ಶಬ್ಧ ಮಾಡುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರಿ ಪೊಲೀಸರು, ಕರ್ಕಶ ಶಬ್ಧ ಮಾಡಿಕೊಂಡು ತೆರಳುತ್ತಿದ್ದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಬೈಕ್ ಸವಾರರಿಗೆ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನ ಲೆಕ್ಕಿಸದ ಪೊಲೀಸರು ವಶಕ್ಕೆ ಪಡೆದ ಬೈಕ್‌ಗಳನ್ನು ಠಾಣೆಗೆ ಸಾಗಿಸಿದ್ದಾರೆ.

Tags:
error: Content is protected !!