ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಈ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶ್ರೀ ರಕ್ಷೆಯಾಗಲಿದೆ ಎಂದು ಶಾಸಕ ಕೆ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಹೆಬ್ಬಾಳ್ ಲೋಕ ನಾಯಕ ನಗರ ದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಸಾಧನೆಗಳನ್ನು ಕ್ಷೇತ್ರದ ಮತದಾರರಿಗೆ ಮನೆ ಮನೆಗೆ ಹೋಗಿ ತಿಳಿಸುವುದರ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚು ಮತ ನೀಡುವುದರೊಂದಿಗೆ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು
ಇದೇ ಸಂದರ್ಭದಲ್ಲಿ ಭಾಸ್ಕರ್ ಗೌಡ, ಮಾಜಿ ಮಹಾಪೌರರಾದ ಪ್ರಕಾಶ್, ಇಂದ್ರ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಮಾಜಿನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಸವರಾಜು, ಸ್ಥಳೀಯ ಮುಖಂಡರಾದ ಕೇಬಲ್ ಮಹೇಶ್, ವಾರ್ಡ್ ಅಧ್ಯಕ್ಷರು ನಾಗರಾಜು, ಮಾಜಿ ಸಿಂಡಿಕೇಟ್ ಸದಸ್ಯರಾದ ಗೋಪಿನಾಥ್, ವಾರ್ಡ್ ಮಹಿಳಾ ಅಧ್ಯಕ್ಷರಾದ ಕಮಲಮ್ಮ, ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು





