ಮೈಸೂರು: ಇದೇ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇಧ ಮಾಡಬೇಕು. ಕಳಸಾ-ಭಂಡೂರಿ ಮಹದಾಯಿ ಯೋಜನೆ ಕೂಡಲೇ ಆರಂಭಿಸಬೇಕು. ಹಿಂದಿ ಹೇರಿಕೆ ಬೇಡವೇ ಬೇಡ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಮಾರ್ಚ್.22 ರಂದು ಕರ್ನಾಟಕ ಬಂದ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಹಾಗಾಗಿ ಕನ್ನಡಿಗರು ಈ ಬಂದ್‌ಗೆ ಕೈ ಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದರು.
ಈ ಬಂದ್ ಅನ್ನು ಬೆಳಗಾವಿಯಿಂದ ಚಾಮರಾಜನಗರವರೆಗೂ ಆಚರಿಸಲಾಗುವುದು. ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ ಮರಾಠಿಗರ ಕೈಯಲ್ಲಿ ಇದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಬೇಕಾಗಿಲ್ಲ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಎಂಇಎಸ್ ಇರಬಾರದು, ಬೆಳಗಾವಿ ಉಳಿಸಬೇಕು. ಕಿಡಿಗೇಡಿಗಳು ಬಸ್ ಚಾಲಕರಿಗೆ ಕನ್ನಡದ ಭೂಮಿಯಲ್ಲಿ ಚಾಲಕರಿಗೆ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಬಂದ್ ಹಿನ್ನೆಲೆ ಚಾಲಕರು ಯಾವುದೇ ವಾಹನಗಳನ್ನು ಚಾಲನೆ ಮಾಡಬಾರದು. ನಮ್ಮ ರಾಜ್ಯಪಾಲರಾಗಲಿ, ಮುಖ್ಯಮಂತ್ರಿಯಾಗಲಿ ಅಥವಾ ಯಾವುದೇ ಸಚವರಾಗಲಿ ಚಾಲಕರು ಕಾರಿನಲ್ಲಿ ಕುಳಿತುಕೊಳ್ಳಬಾರದೆಂದು ಕನ್ನಡ ಪರ ಸಂಘಟನೆಗಳ ಪರವಾಗಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ಇನ್ನು ಕರ್ನಾಟಕ ಬಂದ್ ಆಚರಣೆ ಮಾಡುವ ಪ್ರಯುಕ್ತ ಕನ್ನಡ ಚಿತ್ರರಂಗ ಸಂಪೂರ್ಣ ಬಂದ್ ಆಗುತ್ತದೆ ಎಂದು ನಂಬಿದ್ದೇನೆ. ಈ ಬಂದ್‌ಗೆ ಸ್ಯಾಂಡಲ್‌ವುಡ್ ನಟ ಮತ್ತು ನಟಿಯರು ಆಗಮಿಸಿ ಬೆಂಬಲ ನೀಡಬೇಕು. ಅಲ್ಲದೇ ಪರ ಭಾಷೆ ಚಿತ್ರಗಳನ್ನು ಬಹಿಷ್ಕಾರ ಹಾಕಬೇಕಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮಲಗಿದೆ, ವರ್ಷದಲ್ಲಿ ಮೂರು ದಿನ ಒಬ್ಬಟ್ಟು ಊಟ ಮಾಡಿ ಮಲಗುತ್ತಾರೆ. ಹಾಗಾಗಿ ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…