dasara short filam
ಮೈಸೂರು : ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು, ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಇಂದು ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು.
ಈ ಬಾರಿಯ ಕಿರುಚಿತ ಸ್ಪರ್ಧೆಗೆ 34 ಸಿನಿಮಾಗಳು ನೊಂದಣಿಗೊಂಡು ಎಲ್ಲಾ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ರೀತಿಯ ಕಥಾವಸ್ತುವನ್ನು ಹೊಂದಿದೆ. ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಗೊಂಡ ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡಲಾಗುವುದು.
ಕಿರುಚಿತ್ರ ಸ್ಪರ್ಧೆಯ ಕಿರು ಚಿತ್ರಗಳ ಆಯ್ಕೆಯ ತೀರ್ಪುಗಾರರಾಗಿ ಶಿವಮೊಗ್ಗ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ನರೇಂದ್ರ ಕುಳಗಟ್ಟೆ, ಜಯಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಚರಿತ, ಮೈಸೂರು ವಿಶ್ವವಿದ್ಯಾನಿಲಯದ ಇಎಂಆರ್‌ಸಿ ತಂತ್ರಜ್ಞರಾದ ಗೋಪಿನಾಥ್, ಬೆಂಗಳೂರಿನ ಸೌಂಡ್ ಇಂಜಿನಿಯರ್ ಅನಿಲ್ ಕುಮಾರ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವದ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಹುಣಸೂರು ಉಪ ವಿಭಾಗಾಧಿಕಾರಿಗಳಾದ ವಿಜಯಕುಮಾರ್, ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರಾದ ಶೋಭಾ.ಕೆ ಹಾಗೂ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಹಾಗೂ ಚಲನಚಿತ್ರೋತ್ಸವ ಸಹ ಸಯೋಜಕರಾದ ಶ್ರೇಯಸ್ ಉಪಸ್ಥಿತರಿದ್ದರು.
ಆಯ್ಕೆಗೊಂಡ ಕಿರುಚಿತ್ರಗಳು
1. ಹಿಂಬಾಲಿಸಿ
2.ಆ ಕ್ಷಣ
3.ಅದೃಷ್ಟ ಲಕ್ಷ್ಮೀ
4. ಮಾರ್ವೆನ್
5.ನನ್ನ ಪ್ರಪಂಚ
6.ಹಬ್ಬದ ಹಸಿವು
7.ಕಾಲಾಂತರ
8.ಎರ್ಡ್ರೂಪಾಯಿ
9.ಲಕುಮಿ
10.ಸೆಕ್ಸ್ ಟಾಯ್
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…