ಮೈಸೂರು

ಕಲುಷಿತ ನೀರು ಸೇವನೆ ಪ್ರಕರಣ: ಮುಡಾ ಇಂಜಿನಿಯರ್‌ ಅಮಾನತ್ತಿಗೆ ಶಾಸಕ ಜಿಟಿಡಿ ಆಗ್ರಹ

ಮೈಸೂರು: ಕಲುಷಿತ ನೀರು ಸೇವಿಸಿ ಸಾಲುಂಡಿ ಗ್ರಾಮದ ಯುವಕನೋರ್ವ ಮೃತನಾದ ಘಟನೆಗೆ ಸಂಬಂಧಿಸಿದಂತೆ ಮೂಡಾ ಇಂಜಿನಿಯರ್‌ ನ್ನು ಅಮಾನತು ಮಾಡುವಂತೆ ಶಾಸಕ ಜಿಟಿ ದೇವೇಗೌಡ ಆಗ್ರಹಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತರಿಗೆ ನೇರವಾಗಿ ಕರೆ ಮಾಡಿದ ಶಾಸಕ ಜಿಟಿಡಿ, ಮುಡಾ ಇಂಜಿನಿಯರ್‌ ಕೆ.ಟಿ ರವಿ ಅವರನ್ನು ಅಮಾನತು ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.

ಕಳೆದ ಮೂರು ವರ್ಷಗಳಿಂದ ನಾನು ಹೇಳುತ್ತಲೇ ಇದ್ದೇನೆ. ಸಮರ್ಪಕ ಕುಡಿಯುವ ನೀರಿನ ಪೂರೈಕೆಯಿಲ್ಲ. ಕುಡಿಯುವ ನೀರಿಗೆ ಟ್ಯಾಂಕ್‌ ಮಾಡಿಲ್ಲ. ಸರ್ಕಾರ ಸೆಪ್ಟಿಕ್‌ ಟ್ಯಾಂಕ್‌ ಮಾಡಿದೆ. ಅದಕ್ಕೆ ಪೈಪ್‌ ಲೈನ್‌ ಲಿಂಗ್‌ ಮಾಡಿಲ್ಲ ಎಂದು, ಆದರೆ ರಿಯಲ್‌ ಎಸ್ಟೇಟ್‌ ಮಾಡಿಕೊಂಡು ಸೈಟ್‌ ಮಾರುತ್ತಿದ್ದಾನೆ. ಕೆ.ಟಿ ರವಿ ಅವರನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

ಈ ದುರಂತಕ್ಕೆ ಮೂಡಾ ಅಧಿಕಾರಿಗಳೇ ನೇರ ಕಾರಣ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮೃತಪಟ್ಟರೇ, 48 ಜನರು ಅಸ್ವಸ್ಥರಾಗಿದ್ದಾರೆ. ದೇವರ ದಯೆಯಿಂದ ದೊಡ್ಡ ಅನಾಹುತವಾಗಿಲ್ಲ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಾಲುಂಡಿ ಗ್ರಾಮದಲ್ಲಿ ಮೊದಲು ಕುಡಿಯುವ ನೀರಿಗೆ ಸಂಪರ್ಕ ಕಲ್ಪಿಸುವ ಪೈಪ್‌ಲೈನ್‌ ದುರಸ್ಥಿ ಕಾರ್ಯ ಮೊದಲು ಆಗಬೇಕು. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬರುವ ಸಂಭವವಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಜಿಟಿ ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

21 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

55 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago