ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ ಹೆಚ್ಚುತ್ತಲೇ ಇದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆಯು ತಾತ್ಕಲಿಕ ಸೇತುವೆಯ ಮೂಲಕ ಸುಮಾರು 1000 ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಕೇರಳಕ್ಕೆ ಅಗತ್ಯ ನೆರವು ಘೋಷಿಸಿರುವ ಸಿಎಂ ಸಿದ್ದರಾಮಯ್ಯ, ದುರಂತದ ರಕ್ಷಣೆಗೆ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್‌ರನ್ನು ನೇಮಿಸಿದ್ದಾರೆ.
ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಕೇರಳದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎರಡು ಕೊಠಡಿ ಮೀಸಲು ಇಡಲಾಗಿದೆ.
ಕೆಆರ್ ಆಸ್ಪತ್ರೆಯಲಿ ಒಟ್ಟು 15 ಬೆಡ್‌ಗಳನ್ನು ಕಾಯ್ದಿರಿಸಿದ್ದು, ಅಗತ್ಯವಾದ ಔಷಧಿಗಳು, ಎರಡಡು ಆಕ್ಸಿಜನ್ ಸಿಲಿಂಡರ್, ದಿನದ 24 ಗಂಟೆಯು ಒಬ್ಬ ತಜ್ಞ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದೇವೆ. ತುರ್ತು ಚಿಕಿತ್ಸಾ ಘಟಕದಲ್ಲಿ ಮೂರು ಬೆಡ್‌ಗಳು ಇವೆ. ಮೊದಲು ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಅವಶ್ಯ ಬಿದ್ದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಕೆಆರ್ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಮೆಡಿಕಲ್ ಕಾಲೇಜು ಡೀನ್ ದ್ರಾಕ್ಷಾಯಿಣಿ ತಿಳಿಸಿದ್ದಾರೆ.
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…