ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ಮಾತನಾಡಿ, ನಾನು(ಯದುವೀರ್) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದು, ನನಗೆ ನಿಮ್ಮ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೈಬಲಪಡಿಸಿ ದೇಶದ ವಿಕಸಿತ ಸಂಕಲ್ಪಕ್ಕೆ ನಿಮ್ಮ ಕೊಡುಗೆ ನೀಡಿ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳು ಹಿಂದುಳಿದವರು, ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿವೆ. ಅಂದಿನ ಮೈಸೂರು ಒಡೆಯರು ಅವರು ಬ್ರಾಂಡ್ ಮೈಸೂರು ಯೋಜನೆ ಮೂಲಕ, ಮೈಸೂರು ಕಾರ್ಖನೆ, ಮೈಸೂರು ಸಿಮೆಂಟ್, ಮೈಸೂರು ಸ್ಯಾಂಡಲ್ ಸೋಪ್ ಹೀಗೆ ಹತ್ತು ಹಲವು ಯೋಜನೆಗಳಿದ್ದವು. ಇದೇ ರೀತಿ ಮೋದಿಯವರು ಮೇಕ್ ಇನ್ ಇಂಡಿಯಾ ಮೂಲಕ ಸ್ವದೇಶಿ ವಸ್ತುಗಳಿಗೆ ಒತ್ತು ನೀಡಿ ಭಾರತೀಯರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಾಚೀನ ಭಾರತದ ಕುರುಹುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸಫಲವಾಗಿದೆ. ಮೈಸೂರು ಪರಂಪರೆ ಉಳಿಯಬೇಕು. ಅರಮನೆಯ ಸಾಂಸ್ಕೃತಿಕ ಕುರುಹುಗಳು ಉಳಿಸಿಕೊಂಡು ಬಂದಿದ್ದೇವೆ. ಇದಕ್ಕೆ ಕೇಂದ್ರದ ಯೋಜನೆಗಳು ಪೂರಕವಾಗಿವೆ ಎಂದರು.
ಅರಮನೆಯ ರಾಜವಂಶಸ್ಥ ಪಟ್ಟ ವಹಿಸಿಕೊಂಡ ಬಳಿಕ ಮೈಸೂರು ಭಾಗದ ಜನರು ನನ್ನನ್ನು ಮನೆ ಮಗನ ರೀತಿ ನೋಡಿಕೊಂಡಿದ್ದೀರಿ. ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸುತ್ತೇನೆ. ನನಗೆ ಮತ ನೀಡಿ ಎಂದು ಮನವಿ ಮಾಡಿದರು.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…