Mysore
20
mist

Social Media

ಗುರುವಾರ, 08 ಜನವರಿ 2026
Light
Dark

ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ವಕೀಲರ ಪರಿಷತ್ ಆಯೋಜಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಭಾಗವಜಿಸಲು ಶನಿವಾರ ಮೈಸೂರಿಗೆ ಆಗಮಿಸಿದ ಸಿಎಂ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇರಳದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸರ್ಕಾರವು ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಐಪಿಸಿ ಸೆಕ್ಷನ್ ಗಳ ಹೆಸರನ್ನು ಬದಲಾಯಿಸಿದೆ. 1861 ರಲ್ಲಿ ಜಾರಿಯಾದ ಕಾನೂನುಗಳನ್ನು ಬದಲಾಯಿಸಲು ಹೊರಟಿದೆ. ಏನು ಮಾಡಲಿದ್ದಾರೆ ಕಾದು ನೋಡೋಣ ಇವರು ಬದಲಾಯಿಸುವ ಮೊದಲು ತಿದ್ದುಪಡಿ ಮಾಡಬೇಕಿತ್ತು ಎಂದು ಹೇಳಿದರು.

ಕಾವೇರಿ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಿ ಎಂದಿದೆ. ಆದರೆ ರಾಜ್ಯದಲ್ಲಿ ಅಧಿಕ ಮಳೆ ಆಗದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 40% ಕಮಿಷನ್ ಪಡೆದಿದೆ ಎಂದು ಜನ ಆ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ತನಿಖೆ ಮಾಡಿಸಯವುದಾಗಿ ಹೇಳಿದ್ದೆವು. ಹಾಗಾಗಿ ಗುತ್ತಿಗೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಎಸ್.ಐ.ಟಿ. ತನಿಖೆಗೆ ವಹಿಸಿದ್ದೇವೆ. ವರದಿ ಬಂದ ನಂತರ ಪ್ರಮಾಣಿಕವಾಗಿ ಕೆಲಸ ಮಾಡಿತುವ ಗುತ್ತಿಗೆದಾರರ ಹಣ ಬಿಡುಗಡೆ ಮಾಡುತ್ತೇವೆ. ಭ್ರಷ್ಟಾಚಾರ ಮಾಡಿದ್ದರೆ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!