Mysore
27
broken clouds
Light
Dark

ಸ್ಥಳೀಯ ಚುನಾವಣೆಗೆ ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್‌ಗಳ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆಸಲಾಗುವುದು. ಚುನಾವಣೆಗೆ ನಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ಮೇ.24) ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರು ಕೇಳಿದ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆಯ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದರು.