ಮೈಸೂರು: ನಾಳೆ (ಏ.26) ನಡೆಯಲಿರುವ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣಾ ಮೊದಲ ಹಂತದ ಮತದಾನವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ಸಿದ್ಧವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದರು.
ನಗರದಲ್ಲಿಂದು ಮಾತನಾಡಿರುವ ಅವರು, ಅಧಿಕಾರಿಗಳಿಗೆ ಅಂತಿಮ ಹಂತದ ತಾಂತ್ರಿಕ ತರಭೇತಿ ನೀಡುತ್ತಿದ್ದೇವೆ. ಎಲ್ಲರು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳ ಬಳಿ ತಲುಪಲಿದ್ದಾರೆ. ಇದರ ನಡವೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದರು.
ಸಣ್ಣಪುಟ್ಟ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣಾ ಬಹಿಷ್ಕಾರಕ್ಕೆ ಕೆಲವರು ಮುಂದಾಗಿದ್ದಾರೆ. ಅಂತವರನ್ನು ಸ್ಥಳೀಯ ಪಿಡಿಒಗಳ ಮೂಲಕ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ನಿಮ್ಮದು ಯಾವುದೇ ಸಮಸ್ಯೆಗಳಿದ್ದರೂ ತಪ್ಪದೇ ಬಂದು ಮತದಾನ ಮಾಡಿ ಎಂದು ಮನವಿ ಮಾಡಿದರು.
ಇನ್ನು ಚುನಾವಣಾ ಸಿಬ್ಬಂದಿಗಳಿಗೆ ಪೋಸ್ಟಲ್ ಓಟ್ ನೀಡದಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಬಾರಿ ಚುನಾವಣೆಯಲ್ಲಿ ಪೋಸ್ಟಲ್ ವೋಟ್‌ನ ಪೋಸ್ಟ್ ಮಾಡುವಂತಿಲ್ಲ ಎಂದು ತಿಳಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…