ಮೈಸೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.
ಅವರು ಬುಧವಾರ(ಆ.7) ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.
2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…