ಮೈಸೂರು: ನಮ್ಮಲ್ಲಿ ಒಳ ಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು.
ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆತಿದ್ದು, ಪರಿಷತ್ ಚುನಾವಣೆಯಲ್ಲಿ ಉತ್ತಮ ವಾತಾವರಣವಿದೆ ಎಂದರು.
ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ಯಾವುದು ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಉತ್ತರಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ವ್ಯಂಗ್ಯವಾಡಿದರು.
ಇನ್ನು ಕರ್ನಾಟಕದಲ್ಲಿ ಆಪರೇಷನ್ ಕಮಲ ಆಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆಗೆ, ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…
ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…