Mysore
27
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಗೃಹಲಕ್ಷ್ಮಿ ಯೋಜನೆಗೆ ನಮ್ಮಲ್ಲಿ ಹಣದ ಕೊರತೆ ಇಲ್ಲ : ಡಿ.ಕೆ ಶಿವಕುಮಾರ್

ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್​ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬಾಂಕ್​ಗೆ ಡೆಪಾಸಿಟ್ ಮಾಡಿದ್ದೇವೆ‌. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!