ಮೈಸೂರು : ದೇಶದ ವಿಚಾರ ಬಂದಾಗ ಯಾವುದೇ ಪಕ್ಷ, ಜಾತಿ ಧರ್ಮ ಬಿಟ್ಟು ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಆದರೆ, ಈ ವಿಚಾರದಲ್ಲಿ ಅಪಸ್ವರ ಎತ್ತುವವರು ನಿಜವಾಗಿಯೂ ದೇಶ ದ್ರೋಹಿಗಳು ಎಂದು ಎಂಎಲ್‌ಸಿ ಮಂಜೇಗೌಡ
ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಕಾಶ್ಮೀರದ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸಿ ಉಗ್ರರ ಸದೆ ಬಡಿಯಲು ನಿಂತಿರುವ ಪ್ರಧಾನಿ ಮೋದಿಯ ಬೆನ್ನಿಗೆ ದೇವೇಗೌಡರು ನಿಂತಿದ್ದಾರೆ. ಇಂತಹ ಸಂಧರ್ಭದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಆಪರೇಷನ್ ಸಿಂಧೂರವನ್ನ ಲೇವಡಿ ಮಾಡುತ್ತಿದ್ದಾರೆ. ಇದು ಬಹಳ ಖಂಡನೀಯ ಎಂದರು.
ಎಚ್.ಡಿ ದೇವೇಗೌಡರು ದೇಶ ಕಂಡ ಧೀಮಂತ ನಾಯಕ. ಪ್ರಧಾನಿಯಾಗಿದ್ದ ಸಂಧರ್ಭದಲ್ಲಿ ತೆರೆದ ವಾಹನದಲ್ಲಿ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡಿದ್ದ ಧೀರ ಪ್ರಧಾನಿ. ಅವರ ನೆರಳಿನಲ್ಲಿ ನಮ್ಮ ರಾಜ್ಯದಲ್ಲಿರುವ ಹಲವಾರು ರಾಜಕೀಯ ನಾಯಕರಯ ರಾಜಕೀಯ ಭವಿಷ್ಯ ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
ಇಂದು 50 ವರ್ಷ ಬದುಕೋದೆ ಹೆಚ್ಚು. ಆದರೆ, ಅವರು 93ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದೇವೇಗೌಡರಿಗೆ ನಾಡ ದೇವತೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಡಲಿ. ನಮ್ಮ ನಾಡಿಗೆ ಅವರು ಇರೋದು ಹೆಮ್ಮೆ ಎಂದು ಹೇಳಿದರು.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…