Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ನಾಗಮಂಗಲ ಗಲಭೆಯನ್ನು ತೀವ್ರವಾಗಿ ಖಂಡಿಸುತ್ತೇವೆ : ಯದುವೀರ್‌ ಒಡೆಯರ್‌

ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮದ ಜನರು ಶಾಂತಿಯುತವಾಗಿ ಬಾಳಬೇಕು. ಸಾಮಾಜದಲ್ಲಿ ವಿವಿಧ ಧಾರ್ಮಿಕ ಸ್ಥಳಗಳು ಇವೆ.

ಮೆರವಣಿಗೆ ಮಾಡುವುದು ರಸ್ತೆಯಲ್ಲಿ. ಆದ್ದರಿಂದ ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಕಾನೂನು ಎಲ್ಲರಿಗೂ ಒಂದೆ. ಅದನ್ನು ಅರಿತು ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು ಎಂದು ಹೇಳಿದರು.

ಸೋಮಣ್ಣ ನೇತೃತ್ವದಲ್ಲಿ ಒಳ್ಳೆ ಕೆಲಸ ಮಾಡುತ್ತೇವೆ : ಯದುವೀರ್‌

ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಮಂತ್ರಿಗಳಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದಾರೆ. ಇಂದು ನಗರದ ರೈಲ್ವೆ ಕಚೇರಿಗೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಈಗಾಗಲೆ ಮೈಸೂರು ಭಾಗದಲ್ಲಿ ಬಹಳಷ್ಟು ಕೆಲಸಗಳು ಆಗಿದೆ. ಮುಂದಿನ ದಿನಗಳಲ್ಲಿ ಒಳ್ಳೆ ಅಭಿವೃದ್ಧಿ ಆಗುವ ಕೆಲಸಗಳು ಇದೆ. ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಅದನ್ನು ಮಾಡುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್‌ ಆಶಯ ವ್ಯಕ್ತಪಡಿಸಿದರು.

Tags:
error: Content is protected !!