ಮೈಸೂರು : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ ನಡೆದಿರುವ ಘಟನೆ ಹಿಂಸಾತ್ಮಕ. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮದ ಜನರು ಶಾಂತಿಯುತವಾಗಿ ಬಾಳಬೇಕು. ಸಾಮಾಜದಲ್ಲಿ ವಿವಿಧ ಧಾರ್ಮಿಕ ಸ್ಥಳಗಳು ಇವೆ.
ಮೆರವಣಿಗೆ ಮಾಡುವುದು ರಸ್ತೆಯಲ್ಲಿ. ಆದ್ದರಿಂದ ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಕಾನೂನು ಎಲ್ಲರಿಗೂ ಒಂದೆ. ಅದನ್ನು ಅರಿತು ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು ಎಂದು ಹೇಳಿದರು.
ಸೋಮಣ್ಣ ನೇತೃತ್ವದಲ್ಲಿ ಒಳ್ಳೆ ಕೆಲಸ ಮಾಡುತ್ತೇವೆ : ಯದುವೀರ್
ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಮಂತ್ರಿಗಳಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದಾರೆ. ಇಂದು ನಗರದ ರೈಲ್ವೆ ಕಚೇರಿಗೆ ಹಾಗೂ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈಗಾಗಲೆ ಮೈಸೂರು ಭಾಗದಲ್ಲಿ ಬಹಳಷ್ಟು ಕೆಲಸಗಳು ಆಗಿದೆ. ಮುಂದಿನ ದಿನಗಳಲ್ಲಿ ಒಳ್ಳೆ ಅಭಿವೃದ್ಧಿ ಆಗುವ ಕೆಲಸಗಳು ಇದೆ. ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಅದನ್ನು ಮಾಡುತ್ತೇವೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಆಶಯ ವ್ಯಕ್ತಪಡಿಸಿದರು.
ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್ ಆಯುಕ್ತ ಬಿ…
ದಾವಣಗೆರೆ: ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಈ…
ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ…
ಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ…
ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ವಾದ-ವಿವಾದವನ್ನು ಆಲಿಸಿ ಕಳೆದ…