ಮೈಸೂರು

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನಡೆದ ಜಾ.ದಳ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣರನ್ನು ದ್ವೇಷದ ರಾಜಕಾರಣಕ್ಕಾಗಿ ಬಂಧಿಸಲಾಗಿದೆ. ನಮಗೂ ಟೈಮ್ ಬರುತ್ತದೆ. ಸಮಯ ಬಂದಾಗ ನಾವು ತೀರಿಸಿಕೊಳ್ಳುತ್ತೇವೆ ಎನ್ನುವ ಮಾತನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂಕಲ್ಪ ಮಾಡಿರುವ ಕುರಿತ ಪ್ರಶ್ನೆಗೆ, ಕಾನೂನು ಪ್ರಕಾರ ಪೊಲೀಸ್‌ನವರು ಮಾಡಿರುತ್ತಾರೆ. ಅವರ ಕಾಲದಲ್ಲಿ ಕಾನೂನು ಪ್ರಕಾರ ಮಾಡಲಿ. ಅಧಿಕಾರಕ್ಕೆ ಬರಲ್ಲ.ಒಂದು ವೇಳೆ ಅಧಿಕಾರಕ್ಕೆ ಬಂದರೆ ಕಾನೂನು ಪ್ರಕಾರ ಮಾಡಿದರೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ತಿರುಗೇಟು ನೀಡಿದರು.

2004ರಲ್ಲಿ ನಾನು ಜಾ.ದಳದ ಅಧ್ಯಕ್ಷನಾಗಿದ್ದಾಗ 59 ಸ್ಥಾನಗಳನ್ನು ಮಾತ್ರ ಗೆದ್ದಿದ್ದೇವು. ಈಗ 17 ಸ್ಥಾನಗಳನ್ನು ಗೆದ್ದಿದೆ. ಹೀಗಿರುವಾಗ ಹೇಗೆ ಜಾ.ದಳ ಅಧಿಕಾರಕ್ಕೆ ಬರುತ್ತದೆ. ರಾಜಕೀಯವಾಗಿ ಬಾಯಲ್ಲಿ ಭಾಷಣ ಮಾಡುವುದು ಬೇರೆ. ಹದಿನೇಳು ಸ್ಥಾನಗಳನ್ನು ಗೆದ್ದಿರುವ ಅವರು ಈಗ ಯಾವ ರೀತಿ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿ-ಜಾ.ದಳ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿದರೂ ನಾವು 2023ರಲ್ಲಿ 136 ಸ್ಥಾನಗಳನ್ನು ಗೆದ್ದಿದ್ದೇವೆ. ಮುಂದೆಯೂ ಹೊಂದಾಣಿಕೆ ಮಾಡಿಕೊಂಡರೂ ಕೂಡ ಅಧಿಕಾರಕ್ಕೆ ಬರಲ್ಲ. ಬರದೂ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಹಾಸನ ಜಿಲ್ಲೆಯ ಪ್ರಕರಣದಲ್ಲಿ ಪೊಲೀಸರು ಕಾನೂನು ಪ್ರಕಾರ ನಡೆದುಕೊಂಡಿದ್ದಾರೆ. ಪೊಲೀಸರಿಗೆ ಗಿಫ್ಟ್ ನೀಡಿಲ್ಲ. ಸುಮ್ಮನೇ ರಾಜಕಾರಣಕ್ಕಾಗಿ ಮಾತನಾಡಿದರೆ ಒಪ್ಪಲಾಗದು. ಎಚ್.ಡಿ.ರೇವಣ್ಣ ಪ್ರಕರಣವಲ್ಲ, ಯಾವುದೇ ಪ್ರಕರಣಗಳಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ, ಮಾಡುವುದು ಇಲ್ಲ ಎಂದು ಸ್ಪಷ್ಟಪಡಿಸಿದರು‌.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

32 mins ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

1 hour ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

1 hour ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

2 hours ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

6 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

6 hours ago