ಮೈಸೂರು

ಇಂದಿನ ಕಾಂಗ್ರೆಸ್‌ ಭ್ರಷ್ಟಾಚಾರದ ಮತ್ತೊಂದು ಮುಖವಾಗಿದೆ: ಸಿಟಿ ರವಿ

ಮೈಸೂರು: ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂದು ಇಡಿ ದೇಶವೇ ಅನುಸರಿಸುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 28 ಕ್ಷೇತ್ರ ಗೆಲ್ಲುತ್ತೇವೆ. ನೆರೆಯ ರಾಜ್ಯವಾದ ತಮಿಳುನಾಡಲ್ಲೂ ಕೂಡ ಬಿಜೆಪಿ ಹಾಗೂ ಎನ್ ಡಿಎ ಅಲೆಯನ್ಸ್ ಗೆಲ್ಲುತ್ತದೆ ಎಂದು ಮಾಜಿ ಸಚಿವ ಸಿಟಿ ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು (ಏ.೮) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಕಮ್ಯುನಲ್‌ ಪಕ್ಷವಾಗಿದ್ದು, ಕರೆಪ್ಷನ್‌ನ ಇನ್ನೊಂದು ಮುಖವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತೆರಿಗೆ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ನೀಡಿದವರು ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೊಟ್ಟ ಕೊಡುಗೆ ಬಗ್ಗೆ ಹೇಳಿ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕೊಟ್ಟ ಕೊಡುಗೆಗಳ ಬಗ್ಗೆ ವಿವರಿಸಿ, ಅದು ಬಿಟ್ಟು ಸುಕಾಸುಮ್ಮನೆ ಆರೋಪ ಮಾಡುವುದಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಕೊಟ್ಟ ಕೊಡುಗೆ ಬಗ್ಗೆ ಹೇಳಿ. ರಾಜ್ಯಕ್ಕೆ ಅತಿ ಹೆಚ್ಚು ತೆರಿಗೆ ಪಾಲು ನೀಡಿದವರು ಪ್ರಧಾನಿ ಮೋದಿ ಅವರಾಗಿದ್ದಾರೆ. ಈ ಬಗ್ಗೆ ನಿಮಗೆ ಕಣ್ಣು ಕಾಣದೇ ಹೋದರೇ ನಿಮ್ಮ ದೃಷ್ಟಿಯಾದರೆ ದೃಷ್ಟಿದೋಷ ನಿವಾರಣೆ ಮಾಡಬೇಕು ಎಂದು ಸಿ.ಟಿ ರವಿ ಲೇವಡಿ ಮಾಡಿದರು.

ಮನಮೋಹನ್ ಸಿಂಗ್ ಇದ್ದಾಗ ಕೊಟ್ಟ ಅನುದಾನ, ಮೋದಿಯವರು ಕೊಟ್ಟ ಅನುದಾನದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ದ. ನೀವು ನೀತಿ ಬಗ್ಗೆ ಅಲ್ಲ ಜಾತಿ ಬಗ್ಗೆ ಚರ್ಚೆ ನಡೆಸಲಿಕ್ಕೆ ಮುಂದಾಗಿದ್ದಿರಿ. ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಯನ್ನ ಯಾವ ಮಾನದಲ್ಲಿ ಅಳೆಯಿತ್ತೀರಿ. ದೇವರಾಜ ಅರಸು ಸಾಮಾಜಿಕ ನ್ಯಾಯವನ್ನ ಅಪಮಾನಿಸುವ ರೀತಿ ಮಾತನಾಡುತ್ತೀರಾ. ಅಧಿಕಾರಕ್ಕಾಗಿ ಬಳಸಿಕೊಂಡ ಅಹಿಂದ ಎಲ್ಲಿ ಹೋಯ್ತು ಸಿದ್ದರಾಮಯ್ಯರೇ..? ಎಂದು ಹರಿಹಾಯ್ದರು.

ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಿಎಂ ವಿರುದ್ದ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಅವರು ಚುನಾವಣೆಗೂ ಮುಂಚೆ ಸೋಲು ಒಪ್ಪಿಕೊಂಡಿದ್ದಾರೆ. ಒಕ್ಕಲಿಗರು ನೀತಿ ಹಿಂದೆ ಹೋದವರು, ನೀತಿ ಬೆಂಬಲಿಸಿದವರು. ಯಾರನ್ನೋ ಕರೆದುಕೊಂಡು ಬಂದು ಒಕ್ಕಲಿಗೆ ಎಂದರೆ ಸಂಸ್ಕಾರ ಇಲ್ಲದೇ ಇರುವವರನ್ನು ಕರೆತಂದು ಒಕ್ಕಲಿಗ ಅಂದ್ರೆ ಸಮುದಾಯ ಒಪ್ಪಲ್ಲ. ಕಾರ್ಪೋರೇಷನ್ ಸೋತವರು, ವಿಧಾನಪರಿಷತ್ ನಲ್ಲಿ ಸೋತವರನ್ನ ಪಾರ್ಲಿಮೆಂಟ್ ಗೆ ನಿಲ್ಲಿಸುವ ದುಸ್ಥಿತಿ ಬಂದಿದೆ. ಲೂಸ್ ಟಾಕ್ ಲಕ್ಷ್ಮಣ್. ಇದು ಕಾಂಗ್ರೆಸ್‌ ನವರೇ ಕೊಟ್ಟಿರುವ ಬಿರುದು ಎಂದು ಕಿಡಿಕಾರಿದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಬಿಜೆಪಿ ಮುಖಂಡರಾದ ಸಂದೇಶ್ ಸ್ವಾಮಿ, ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

19 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

3 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago