Mysore
23
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿ.ಎಂ ಸ್ಪಷ್ಟ ಘೋಷಣೆ

2028 karnataka assembly election

ಕೆಆರ್ ಎಸ್ : ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಾವರಿಗೆ ನಮ್ಮ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 TMC ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.

Tags:
error: Content is protected !!