Mysore
17
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ಆ.10ಕ್ಕೆ ಅರಮನೆ ಅಂಗಳದಲ್ಲಿ ಗಜಪಡೆಗೆ ಸ್ವಾಗತ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ತಂಡಕ್ಕೆ ಆಗಸ್ಟ್ 10 ರಂದು ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ಮೈಸೂರು ಅರಮನೆಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಂಜೆ ೬.೪೫ ರಿಂದ ೭.೨೦ರ ಶುಭ ಮಕರ ಗೋಧೂಳಿ ಲಗ್ನದಲ್ಲಿ ಕಾರ್ಯಕ್ರಮ ನಡೆಯಲಿದ್ದು,ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆ ಆವರಣಕ್ಕೆ ಬರಮಾಡಿಕೊಳ್ಳಲಾಗುತ್ತದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವಎಚ್.ಡಿ ಕುಮಾರಸ್ವಾಮಿ,ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡುವರು. ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕ ತಿ ಸಚಿವಶಿವರಾಜ್ ಸಂಗಪ್ಪ ತಂಗಡಗಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಪುಷ್ಪ ಅಮರನಾಥ್,ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ,ಡಾ. ಮಾನಸ , ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಲೋಕಸಭಾ ಕ್ಷೇತ್ರದಸಂಸದ ಸುನೀಲ್ ಬೋಸ್ ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಡಿ. ರವಿಶಂಕರ್, ಕೆ. ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎ.ಎಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ.ವಿವೇಕಾನಂದ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್,ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರಾದೇಶಿಕ ಆಯುಕ್ತ ಡಿ.ಎಸ್. ರಮೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಮತ್ತಿತರರು ಉಪಸ್ಥಿತರಿರುತ್ತಾರೆ.

Tags:
error: Content is protected !!