ಮೈಸೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ನೀಡದೆ, ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರನ್ನು ಪ್ರಶ್ನಿಸಿದ್ದಾರೆ.
ನಗರದ ಜಲದರ್ಶಿನಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ ಎಂದರು.
ಇನ್ನು, 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…