ಮೈಸೂರು

ಸಿದ್ದರಾಮಯ್ಯ ಜ್ಯೋತಿಷಿ ಆಗಿದ್ದು ಯಾವಾಗ : ಹೆಚ್‌.ಡಿ.ಕುಮಾರಸ್ವಾಮಿ ಟೀಕೆ

ಮೈಸೂರು : ಮುಖ್ಯಮಂತ್ರಿ ಹುದ್ದೆ ಬಿಟ್ಟು ಸಿದ್ದರಾಮಯ್ಯ ಜ್ಯೋತಿಷಿ ಆಗಿದ್ದು ಯಾವಾಗ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವುದನ್ನು ಬಿಟ್ಟು ಜ್ಯೋತಿಷಿ ಹೇಳುವ ಕೆಲಸ ಯಾವಾಗ ಪ್ರಾರಂಭ ಮಾಡಿದ್ದಾರೋ ಗೊತ್ತಿಲ್ಲ ಎಂದು ಟೀಕೆ ಮಾಡಿದರು.

ಸಿದ್ದರಾಮಯ್ಯ ಅವರ ಜ್ಯೋತಿಷ್ಯದ ಫಲಿತಾಂಷ ಏನಾಗುತ್ತದೆ! ಮಂಡ್ಯ ಜನತೆ ಯಾವ ತೀರ್ಮಾನ ನೀಡುತ್ತಾರೆ ಎಂದು ಚುನಾವಣೆಯಲ್ಲಿ ನೋಡೋಣ ಎಂದು ಕುಮಾರಸ್ವಾಮಿ ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

1 hour ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

5 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

5 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

5 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

5 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago