ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನ,ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಅರ್ಚಕರು ಯದುವೀರ್‌ಗೆ ಹಾರ ಹಾಕಿ ಆಶೀರ್ವಾದ ಮಾಡಿದರು.
ಸದ್ವಿದ್ಯಾಶಾಲೆಯ ಮುಂಭಾಗ ಶ್ರೀರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಿ ಕೋಸುಂಬರಿ,ಪಾನಕ ವಿತರಿಸಲಾಗುತ್ತಿತ್ತು. ಈ ವೇಳೆ ತೆರೆದ ವಾಹನದಲ್ಲಿ ಪ್ರಚಾರದಲ್ಲಿ ತೊಡಗಿದ್ದಾಗ ಕಾರ್ಯಕರ್ತರು ನೀಡಿದ ಪಾನಕ,ಮಜ್ಜಿಗೆ ಸೇವನೆ ಮಾಡಿದರು. ಮತ್ತೊಂದು ಜಾಗದಲ್ಲಿ ಕಾರ್ಯಕರ್ತರಿಗೆ ಪಾನಕ ವಿತರಿಸಿ ಸಂಭ್ರಮಕ್ಕೆ ಕಾರಣರಾದರು.
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…
ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…