Categories: ಮೈಸೂರು

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ: ರಕ್ಷಿಸುತ್ತಿರುವವರು ಯಾರು: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು.

ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಪದೇ ಪದೇ ಹರಾಜಾಗುತ್ತಿದೆ. ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ. ನಿಮಗೆ ಗೊತ್ತಿಲ್ವಾ? ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದ ರೈತರಿಗೆ ಕೇಂದ್ರ ಮಾಡಿದ ಅನ್ಯಾಯ ಸರಿಯಾ?

ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ. ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ನಾಡಿದ್ದು ಸರಿ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದರೆ ಮಣ್ಣಿನ ಮಗ, ರೈತರ ಮಗ ಅಂದುಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಡ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ.

ರೈತರಿಗೆ ಶೇ4.5 ಬಡ್ಡಿದರದಲ್ಲಿ ನಬಾರ್ಡ್ ರಾಜ್ಯದ ರೈತರಿಗೆ ಸಾಲ ಕೊಡುತ್ತದೆ. ಈ ಬಡ್ಡಿಯನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಆದರೆ ಈಗ ನಬಾರ್ಡ್ ಸಾಲದ ಪ್ರಮಾಣ ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕ್ ಗಳ ಬಳಿ ಸಾಲಕ್ಕೆ ಹೋಗಿ ಶೇ10 ರಷ್ಟು ಬಡ್ಡಿ ಕಟ್ಟಬೇಕು. ಇದು ರಾಜ್ಯಕ್ಕೆ ಆಗುವ ನಷ್ಟ. ಇಷ್ಟು ದೊಡ್ಡ ಪ್ರಮಾಣದ ಅನ್ಯಾಯವನ್ನು ಜೋಶಿ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಿಂದಲೇ ಆಯ್ಕೆ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಅನ್ಯಾಯ ಸರಿ ಪಡಿಸಿ ಎಂದು ಮನವಿ ಕೊಟ್ಟಿದ್ದೇನೆ. ರಾಜ್ಯದ ರೈತರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅನ್ಯಾಯ ಸರಿಪಡಿಸಲಿ ಎಂದು ಸವಾಲು ಹಾಕಿದರು.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ: ಆರ್.‌ಅಶೋಕ್‌

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

7 mins ago

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…

15 mins ago

ಪಾಕಿಸ್ತಾನದಲ್ಲಿ ಮಜೂದ್‌ ಅಜರ್‌ ಸಹೋದರ ಅನುಮಾನಾಸ್ಪದ ಸಾವು

ಇಸ್ಲಾಮಾಬಾದ್:‌ ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…

36 mins ago

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

1 hour ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago