mlc vishwanath pakistan
ಮೈಸೂರು : ರಾಜ್ಯ ಸರ್ಕಾರವು ತಮ್ಮ ವೈಫಲ್ಯಗಳನ್ನು ಮರೆ ಮಾಚಿ ಜನರ ಗಮನ ಬೇರೆಡೆಗೆ ಸೆಳೆಯಲು ಜನರ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಏನು ಸಾಧನೆ ಮಾಡಿದೆ ಎಂದು ಸಾಧನಾ ಸಮಾವೇಶ ಮಾಡುತ್ತಿದೆ? ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ ಎಂದು ಪ್ರಶ್ನಿಸಿದ್ದಾರೆ.
ಸಾಧನಾ ಸಮಾವೇಶದಲ್ಲಿ ಸಿಎಂ ಸೇರಿದಂತೆ ಎಲ್ಲಾ ಸಚಿವರ ಆಸ್ತಿಯ ವಿವರಗಳನ್ನು ಬಹಿರಂಗಪಡಿಸಬೇಕು. ಮುಖ್ಯಮಂತ್ರಿಗಳೇ ನಿಮ್ಮ ಸ್ವಂತ ಜಿಲ್ಲೆಯಲ್ಲಿ ಏನು ಅಭಿವೃದ್ದಿ ಮಾಡಿದ್ದೀರಾ ಹೇಳಿ? ಇದನ್ನು ನಿಮ್ಮ ಸಾಧನಾ ಸಮಾವೇಶದಲ್ಲಿ ತಿಳಿಸಬೇಕು. ನಿಮ್ಮ ಕಟು ಮಾತಿನಿಂದ ಎಷ್ಟು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿಸಬೇಕು. ಮುಡಾ ಹಗರಣದ ಬಗ್ಗೆಯೂ ತಿಳಿಸಬೇಕು. ಇಲ್ಲದಿದ್ದರೆ ನಾವು ಕೂಡ ಸಮಾವೇಶ ಮಾಡಿ ನಿಮ್ಮ ವೈಫಲ್ಯ ಗಳನ್ನು ಜನರ ಮುಂದಿಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಜನರಿಗೆ ಟೋಪಿ ಹಾಕಲು ಸಮಾವೇಶ:- ರಾಜ್ಯ ಸರ್ಕಾರ ಜನರಿಗೆ ಟೋಪಿ ಹಾಕಲು ಸಾಧನಾ ಸಮಾವೇಶ ಮಾಡುತ್ತಿದೆ. ಬರೀ ಚಮಚಗಳ ಕೈಯಲ್ಲಿ ಹೊಗಳಿಸಿ ಕೊಳ್ಳುವುದೆ ಸಿದ್ದರಾಮಯ್ಯ ಕೆಲಸ. ಇದೊಂದು ಪಬ್ಲಿಸಿಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಎಲ್ಲಾ ಜಿಲ್ಲಾ ಮಂತ್ರಿಗಳು ಕಾಂಟ್ರ್ಯಾಕ್ಟ್, ವರ್ಗಾವಣೆ ಕಮೀಷನ್ ನಲ್ಲಿ ಮುಳುಗಿದ್ದಾರೆ. ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದರು. ವ್ಯಾಪಾರ ಸರಿ ಆಗಲಿಲ್ಲ ಹೀಗಾಗಿ ಇದು ಮುಂದೂಡಲಾಗಿದೆ ಎಂದು ಟೀಕಿಸಿದರು.
ಕುರುಬರಿಗೆ, ಹಿಂದುಳಿದವರಿಗೆ ಏನ್ ಮಾಡಿದ್ದಿರಿ ಹೇಳಿ ಸಿದ್ದರಾಮಯ್ಯ. ಇದು ಹುಚ್ಚರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹುಚ್ಚರು ಮಾಡಬೇಕು ಅಷ್ಟೆ. ನೀರಾವರಿ ಇಲಾಖೆ ಯಲ್ಲಿ ಒಂದು ಕೆಲಸ ಆಗಿದ್ದಿಯಾ? ಈ ಇಲಾಖೆನಾ ಕಿಕ್ ಬ್ಯಾಕ್ ಗೆ ಇಟ್ಟು ಕೊಳ್ಳಲಾಗಿದೆ ಎಂದು ಟೀಕಿಸಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…