Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಬೈಕ್‌ಗೆ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು

bike lorry accident

ಮೈಸೂರು: ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.

ಪತಿ ಮಹೇಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!