Mysore
31
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ನಡೆದ ಈ ಘಟನೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಹಂಚೀಪುರ ಗ್ರಾಮದ ರೈತ, ಶಿವಕುಮಾರ್ ಮೃತಪಟ್ಟವರು. ಅವರಿಗೆ 60 ವರ್ಷ ವಯಸ್ಸಾಗಿತ್ತು.

ರಾತ್ರಿ ತಮ್ಮ ಜಮೀನಿಗೆ ಕಾವಲು ಕಾಯಲು ತೆರಳಿದ್ದ ಶಿವಕುಮಾರ್, ಬೆಳಿಗ್ಗೆ ಸುಮಾರು 5.30ರ ವೇಳೆಗೆ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಶಿವಕುಮಾರ್ ಸಾವನ್ನಪ್ಪಿದ್ದಾರೆ.

ಘಟನೆಯ ಬೆನ್ನಲ್ಲೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಪದೇ ಪದೇ ಕಾಡುಪ್ರಾಣಿಗಳ ದಾಳಿಗಳು ನಡೆಯುತ್ತಿದ್ದು, ಭಯದ ನಡುವೆಯೇ ಬದುಕುವ ಪರಿಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಬೆಳೆಗಳನ್ನು ರಕ್ಷಿಸಲು ಜಮೀನಿಗೆ ಕಾವಲು ಕಾಯಲು ಹೋಗುವ ರೈತರು, ತಮ್ಮ ಪ್ರಾಣವನ್ನೇ ಅಪಾಯಕ್ಕೆ ಒಡ್ಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಜಮೀನಿಗೆ ತೆರಳುವುದಕ್ಕೂ, ಗ್ರಾಮಕ್ಕೆ ಹಿಂತಿರುಗುವುದಕ್ಕೂ ಆತಂಕ ಕಾಡುತ್ತಿದೆ ಎಂಬುದು ಗ್ರಾಮಸ್ಥರ ನೋವು.

ರೈತ ಶಿವಕುಮಾರ್ ಅವರ ಸಾವು, ಅರಣ್ಯದಂಚಿನ ಗ್ರಾಮಗಳಲ್ಲಿ ಜನರ ಸುರಕ್ಷತೆಯ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಬೆಳೆ ರಕ್ಷಣೆಯ ಜೊತೆಗೆ ರೈತರ ಜೀವ ರಕ್ಷಣೆಗೂ ಆದ್ಯತೆ ನೀಡಬೇಕಾದ ಅಗತ್ಯವನ್ನು ಈ ದುರಂತ ಎತ್ತಿ ತೋರಿಸಿದೆ.

 

Tags:
error: Content is protected !!