ಮೈಸೂರು

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ.

ಸರಗೂರು ತಾಲ್ಲೂಕಿನ ದೊಡ್ಡಬರಗಿ ಗ್ರಾಮದ ವೀರಭದ್ರೇಗೌಡ (60) ಮೃತಪಟ್ಟವರು. ವೀರಭದ್ರೇಗೌಡ ಅವರು ಇಂದು ಬೆಳಗ್ಗೆ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಲು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಕಾಡಗೆರೆ ಗ್ರಾಮದ ಸಮೀಪ ಏಕಾಏಕಿ ಎದುರಾದ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿ ತುಳಿದು ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ.

ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರೇಗೌಡ ಅವರನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಿಂದ ದೊಡ್ಡಬರಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಕಾಡಾನೆಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

4 hours ago